Breaking News

ಧಾರವಾಡ ನಗರ ಬಸ್ ನಿಲ್ದಾಣ ಕಾಮಗಾರಿ ಪ್ರಗತಿ

ಧಾರವಾಡ : ಧಾರವಾಡ ನಗರವು ವಿದ್ಯಾಕಾಶಿ ಎಂದು ಹೆಸರು ಪಡೆದಿದ್ದು, ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಿಗೆ ಪ್ರತಿದಿನ ಭೇಟಿಕೊಡುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯು ಹೆಚ್ಚುತ್ತಿದೆ. ಪ್ರಯಾಣಿಕರಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮರು ನಿರ್ಮಾಣಗೊಳಿಸಲಾಗುತ್ತಿದೆ ಎಂದು ಎನ್‍ಡಬ್ಲ್ಯೂಕೆಎಸ್‍ಆರ್‍ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾಮಗಾರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜನೇವರಿ 8, 2024 ರಂದು ಶಂಕುಸ್ಥಾಪನೆಯನ್ನು ನೆರವೇರಿಸಿದ್ದರು. ಇಲಾಖೆ ಮತ್ತು ಸರ್ಕಾರದ ನಗರ ಭೂಸಾರಿಗೆ ನಿರ್ದೇಶನಾಲಯ ನೀಡಿರುವ ಅನುದಾನದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಕಾಮಗಾರಿಗೆ ನಿಗಪಡಿಸಿದ ಕಾಲಾವಧಿಯು 12 ತಿಂಗಳಾಗಿದ್ದು, ಒಪ್ಪಂದದ ಪ್ರಕಾರ ಗುತ್ತಿಗೆದಾರರು ಮೇ 14, 2025 ರಂದು ಪೂರ್ಣಗೊಳಿಸಬೇಕಿದ್ದು, ಅದಕ್ಕೂ ಪೂರ್ವದಲ್ಲೇ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಬಸ್ ನಿಲ್ದಾಣದ ಮುಖ್ಯ ಕಟ್ಟಡವು ಪ್ಲಿಂತ್ ಮಟ್ಟಕ್ಕೆ ಬಂದಿದ್ದು, ಪೆÇ್ಲೀರ್ ಕಾಲಂ ಎತ್ತರಿಸುವ ಕೆಲಸ ಹಾಗೂ ಬಸ್ ನಿಲುಗಡೆ ಅಂಕಣಗಳ ಕಾಲಂ ಕಾಂಕ್ರೀಟ್ ಕೆಲಸ ಪ್ರಗತಿಯಲ್ಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *