Breaking News

ಅಪಘಾತದಲ್ಲಿ ಸಾವಿನಪ್ಪಿದ ಕುಟುಂಬಗಳಿಗೆ ಚೆಕ್ ನೀಡಿದ ವಿನಯ್ ಕುಲಕರ್ಣಿ

ಧಾರವಾಡ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಎರಡು ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಂದ ತಲಾ 2 ಲಕ್ಷ ರೂಪಾಯಿ ಪರಿಹಾರದ ಚೆಕ್‌ನ್ನು ಶಾಸಕ ವಿನಯ್ ಕುಲಕರ್ಣಿ ಅವರು ಮೃತರ ಕುಟುಂಬಕ್ಕೆ ಹಸ್ತಾಂತರಿಸಿದರು.

2022ರ ಜೂನ್ 26 ರಂದು ಧಾರವಾಡ ತಾಲೂಕಿನ ವೆಂಕಟಾಪುರ ಕ್ರಾಸ್ ಬಳಿ ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಧಾರವಾಡ ತಾಲೂಕಿನ ಬೋಗೂರು ಗ್ರಾಮದ ಸುಶೀಲಾ ಹರಿಜನ ಹಾಗೂ ಚೆನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿಯ ರಾಜು ಬರಮೀತ್ರಿ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಈ ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಕೋರಲಾಗಿತ್ತು. ಸದ್ಯ ಎರಡೂ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಬಂದಿದ್ದು, ಆ ಪರಿಹಾರದ ಚೆಕ್‌ನ್ನು ಶಾಸಕ ವಿನಯ್ ಕುಲಕರ್ಣಿಯವರು ಚೆನ್ನಮ್ಮನ ಕಿತ್ತೂರಿನಲ್ಲಿ ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *