Breaking News

ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಲು ರಾಜ್ಯ ಸರ್ಕಾರ ಆದೇಶ

ಬಳ್ಳಾರಿ : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು.
ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕು.
ಇ-ಆಸ್ತಿ ತಂತ್ರಾಂಶದಿಂದ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದಾಗಿದೆ. ಹಾಗಾಗಿ ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *