Breaking News

ದಸರಾ ಉದ್ಘಾಟನೆಗೆ ಸಾಹಿತಿ ಹಂ.ಪ.ನಾಗರಾಜಯ್ಯ ಹೆಸರು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ಈ ಬಾರಿಯ ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಶುರುವಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ, ಇಲ್ಲಿವರೆಗೆ ಈ ಬಾರಿ ದಸರಾ ಮಹೋತ್ಸವದ ಉದ್ಘಾಟಕರು ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಸದ್ಯ ಸಿಎಂ ಸಿದ್ದರಾಮಯ್ಯ ಅವರು ದಸರಾ ಉದ್ಘಾಟಕರ ಹೆಸರು ಘೋಷಣೆ ಮಾಡಿ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ.
ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಿರಿಯ ಸಾಹಿತಿಯಾಗಿರುವ ಹಂ.ಪ.ನಾಗರಾಜಯ್ಯ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದಾಗಿ ತಿಳಿಸಿದ್ದಾರೆ.
ಇತ್ತೀಚೆಗೆ ದಸರಾ ಉದ್ಘಾಟಕರ ಹೆಸರು ಘೋಷಣೆ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೇ ನೀಡಲಾಗಿತ್ತು. ಅದರಂತೆ ಇತ್ತೀಚೆಗೆ ಸಭೆಯೂ ನಡೆದಿತ್ತು. ಕೊನೆಗೆ ಸಿಎಂ ಸಿದ್ದರಾಮ್ಯಯ ಅವರು ಹಂ.ಪ.ನಾಗರಾಜಯ್ಯ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಶೀಘ್ರದಲ್ಲೇ ಅವರಿಗೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಲಿದ್ದಾರೆ.
ಇನ್ನು ಬಾರಿಯ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು 12ನೇ ತಾರೀಖಿನವರೆಗೂ ನಡೆಯಲಿದೆ. ಅದರಂತೆ ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಆಗಲಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *