Breaking News

ವಿಜಯನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶಾಸಕರಿಂದ ಸಚಿವ ಎಂ.ಬಿ.ಪಾಟೀಲ್ ಗೆ ಮನವಿ

ಹೊಸಪೇಟೆ : ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ,‌ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್. ಆರ್.ಗವಿಯಪ್ಪ ಅವರು ಇಂದು ಬೆಂಗಳೂರಿನಲ್ಲಿ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ವಿಜಯನಗರ ಜಿಲ್ಲೆಯು ಪ್ರಾಕೃತಿಕವಾಗಿ ತನ್ನದೇ ವಿಶೇಷತೆಯನ್ನು ಹೊಂದಿದ್ದು, ಜಾಗತಿಕವಾಗಿ ಹೆಸರುವಾಸಿಯಾಗಿದೆ.
ಪ್ರತಿ ದಿನ ಹಂಪಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಅಗಮಿಸುತ್ತಾರೆ. ಅಲ್ಲದೆ, ಹಂಪಿ ಸುತ್ತಲೂ ಪ್ರಸಿದ್ಧ ಧಾರ್ಮಿಕ ತಾಣಗಳಿವೆ. ಹಾಗಾಗಿ ವಿಜಯನಗರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಅವಶ್ಯಕತೆ ಇದೆ ಎಂದು ಶಾಸಕ ಗವಿಯಪ್ಪ ಸಚಿವರಿಗೆ ಮನವರಿಕೆ ಮಾಡಿದರು.
ಐತಿಹಾಸಿಕ ಹಂಪಿ ವ್ಯಾಪ್ತಿಯಲ್ಲಿ ಟೂರಿಸಂ ಪಾರ್ಕ್ ನಿರ್ಮಾಣ ಹಾಗೂ ಹೊಸಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಟೀಲ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕರು ಸಚಿವರಿಗೆ ಮನವಿ ಸಲ್ಲಿಸಿದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *