Breaking News

ಕರ್ನಾಟಕ ದಿನಗೂಲಿ ನೌಕರರಿಗೆ ವೇತನ ಶ್ರೇಣಿ, ಆರ್ಥಿಕ ಸೌಲಭ್ಯ ಮಂಜೂರು: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024ರನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ಆದೇಶ ಹೊರಡಿಸಿದೆ.
ವಿವಿಧ ಅಧಿಸೂಚನೆ, ಸುತ್ತೋಲೆಗಳನ್ನು ಉಲ್ಲೇಖ ಮಾಡಿ ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ನಾಗರತ್ನ ವಿ. ಪಾಟೀಲ್, ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ. ವಿವಿಧ ಅಧಿಸೂಚನೆಯನ್ವಯ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012 ಅನ್ನು ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪಟ್ಟ ದಿನಗೂಲಿ ನೌಕರರಿಗೆ ದಿನಾಂಕ 1.8.2018ರಿಂದ ಜಾರಿಗೆ ಬರುವಂತೆ 2018ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಅವರುಗಳನ್ನು ಮುದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನವನ್ನು ದಿನಾಂಕ 1.8.2018ರಿಂದ ಜಾರಿಗೆ ಬರುವಂತೆ ನಿಗದಿಗೊಳಿಸಿ ಆದೇಶಿಸಲಾಗಿದೆ. ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪಟ್ಟ, ದಿನಗೂಲಿ ನೌಕರರಿಗೆ ದಿನಾಂಕ 19.9.2014ರ ಆದೇಶದಂತೆ ನೀಡಲಾಗುತ್ತಿದ್ದ ಶೇಕಡ 75ರಷ್ಟು ತುಟ್ಟಿಭತ್ಯೆಯನ್ನು ಶೇಕಡ 90ಕ್ಕೆ ಹಾಗೂ ಶೇಕಡ 75ರಷ್ಟು ನೀಡುತ್ತಿದ್ದ ಮನೆ ಬಾಡಿಗೆ ಭತ್ಯೆಯನ್ನು ಶೇಕಡ 90ಕ್ಕೆ ನಿಗದಿಪಡಿಸಿ ಆದೇಶಿಸಲಾಗಿದೆ.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *