Breaking News

ತುಂಗಭದ್ರ ಜಲಾಶಯಕ್ಕೆ ನಾಳೆ ಸಿಎಂ ಬಾಗಿನ ಅರ್ಪಣೆ

ಕೊಪ್ಪಳ: ಗೇಟ್‌ ಹಾನಿಯಾದ ಬಳಿಕ ಮತ್ತೆ ತುಂಬಿದ ತುಂಗಭದ್ರಾ ಜಲಾಶಯಕ್ಕೆ ನಾಳೆ ಭಾನುವಾರ (ಸೆ. 22) ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಬಾಗಿನ ಅರ್ಪಿಸಲಿದ್ದಾರೆ.
ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಕಡಪಾ, ಕರ್ನೂಲು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ನದಿಗೆ ಹೊಸಪೇಟೆ ಕೊಪ್ಪಳ ಮಧ್ಯೆ ಇರುವ ಜಲಾಶಯದ 19ನೇ ಕ್ರಸ್ಟ್‌ಗೇಟು ಸುಮಾರು ಒಂದು ತಿಂಗಳ ಹಿಂದೆ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದುಹೋಗುತ್ತಿತ್ತು, ರೈತರು ಆತಂಕಗೊಂಡಿದ್ದರು. ಸರಕಾರ ಸ್ಥಳೀಯ ಜನಪ್ರತಿನಿಧಿಗಳು, ಎಂಜಿನಿಯರ್‌ಗಳು ತೋರಿದ ಕಾಳಜಿ ಹಾಗೂ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವ ನೂರಾರು ಕಾರ್ಮಿಕರ ತಂಡ ಶ್ರಮವಹಿಸಿ ಕೇವಲ ಐದು ದಿನಗಳಲ್ಲಿ ಗೇಟು ಅಳವಡಿಸಿ ನೀರು ಪೋಲಾಗುವುದನ್ನು ನಿಯಂತ್ರಿಸಿದರು. ಪರಿಣಾಮವಾಗಿ ಈಗ ಜಲಾಶಯ ಪುನಃ ಭರ್ತಿಯಾಗಿದೆ .ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಇದೇ ವೇಳೆ ಡ್ಯಾಂ ದುರಸ್ಥಿಗೆ ಸಹಕರಿಸಿದ ಸಿಬ್ಬಂದಿಗೆ ಗೌರವ ಅರ್ಪಣೆ ಮಾಡಲಿದ್ದಾರೆ.
ತುಂಗಭದ್ರಾ ಅಣೆಕಟ್ಟಿನ ಕೊಚ್ಚಿ ಹೋದ ಕ್ರೆಸ್ಟ್ ಗೇಟ್-19 ಅನ್ನು ಕೇವಲ ಒಂದು ವಾರದೊಳಗೆ ನಿರ್ಮಿಸಿ, ಅಳವಡಿಸಿದ ಅಧಿಕಾರಿಗಳು, ತಂತ್ರಜ್ಞರು, ಸಿಬ್ಬಂದಿಗಳು ಹಾಗೂ ಗೇಟ್ ನಿರ್ಮಾಣ ಸಂಸ್ಥೆಯ ಪ್ರತಿನಿಧಿಗಳಿಗೆ ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಾಳೆ ಸೆಪ್ಟೆಂಬರ್ 22ರಂದು ಬೆಳಿಗ್ಗೆ 11.55ಕ್ಕೆ ಮುನಿರಾಬಾದ್ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಚಿವ ಎನ್.ಎಸ್.ಬೋಸರಾಜು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *