Breaking News

ನಾಳೆ ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ಕೊಪ್ಪಳ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆಪ್ಟೆಂಬರ್ 22ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‍ಸ್ಟ್ರೀಪ್‍ಗೆ ಆಗಮಿಸುವರು.
ಅಲ್ಲಿಂದ 10.55ಕ್ಕೆ ನಿರ್ಗಮಿಸಿ ಬೆಳಗ್ಗೆ 11.15ಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಆಗಮಿಸಿ ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಹಮ್ಮಿಕೊಂಡಿರುವ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡುವರು.
ಬೆಳಗ್ಗೆ 11.45ಕ್ಕೆ ಜಲಾಶಯದಿಂದ ನಿರ್ಗಮಿಸಿ 11.55ಕ್ಕೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್‍ಗೆ ಆಗಮಿಸಿ, ಮುನಿರಾಬಾದ್ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಿರುವ, ತುಂಗಭದ್ರಾ ಜಲಾಶಯದ ಗೇಟ್ ನಂ.19ರ ದುರಸ್ತಿ ಕಾರ್ಯದಲ್ಲಿ ಭಾಗಿಯಾದ ಅಧಿಕಾರಿ, ಸಿಬ್ಬಂದಿ, ಕಾರ್ಮಿಕರಿಗೆ ಅಭಿನಂದನೆ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರ ಕಾರ್ಮಿಕರಿಗೆ ಸಾಂಕೇತಿಕವಾಗಿ ನೇಮಕಾತಿ ಆದೇಶ ಪತ್ರ ವಿತರಣೆ ಮಾಡುವರು.
ಮಧ್ಯಾಹ್ನ 01.30ಕ್ಕೆ ಮುನಿರಾಬಾದ್ ನಿಂದ ನಿರ್ಗಮಿಸಿ, 01.40ಕ್ಕೆ ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹಕ್ಕೆ ತೆರಳುವರು. ಬಳಿಕ ಮಧ್ಯಾಹ್ನ 03.30ಕ್ಕೆ ಜಲಾಶಯದಿಂದ ನಿರ್ಗಮಿಸಿ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‍ಸ್ಟ್ರೀಪ್‍ಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *