ನವದೆಹಲಿ: ಆಮ್ ಆದ್ಮಿ ಪಕ್ಷದ ನಿಯೋಜಿತ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಆತಿಶಿ ಇಂದು ದೆಹಲಿಯ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ ನಿವಾಸ್ ನಲ್ಲಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.
ಕಲ್ಕಾಜಿ ಕ್ಷೇತ್ರವನ್ನ ಪ್ರತಿನಿಧಿಸುವ ಮತ್ತು ನಿರ್ಗಮನ ದೆಹಲಿ ಕ್ಯಾಬಿನೆಟ್ ನಲ್ಲಿ ಏಕೈಕ ಮಹಿಳಾ ಸಚಿವರಾಗಿರುವ ಅತಿಶಿ ಅವರನ್ನ ಸೆಪ್ಟೆಂಬರ್ 17 ರಂದು ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಎಎಪಿ ಶಾಸಕರು ಮುಖ್ಯಮಂತ್ರಿ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

