ಬೆಂಗಳೂರು: ರೇಷ್ಮೆ ಕೃಷಿ ಪಾಲುದಾರರಿಗೆ ಸರ್ಕಾರ ನೀಡುತ್ತಿರುವ ಸಹಾಯಧನ ಬಹಳ ಕಡಿಮೆ ಇದೆ. ಇದನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ರೇಷ್ಮೆ ಮಂಡಳಿ ಸದಸ್ಯ, ಸಂಸದ ಎ.ಜಿ. ಲಕ್ಷ್ಮಿನಾರಾಯಣ ಆಗ್ರಹಿಸಿದರು.
ನಗರದಲ್ಲಿ ಶನಿವಾರ ನಡೆದ ರೇಷ್ಮೆ ಕೃಷಿ ಪಾಲುದಾರರ ಸಭೆ ಮತ್ತು ಕೇಂದ್ರ ರೇಷ್ಮೆ ಮಂಡಳಿ ಅಮೃತ ಮಹೋತ್ಸವ ಆಚರಣೆಯಲ್ಲಿ ಅವರು ಮಾತನಾಡಿದರು.
ಕೃಷಿ ಪಾಲುದಾರರಿಗೆ ನೀಡುತ್ತಿರುವ ಸಾಲ ಸೌಲಭ್ಯವನ್ನು ₹4 ಲಕ್ಷದಿಂದ ₹10 ಲಕ್ಷಕ್ಕೆ ಏರಿಸಬೇಕು. ರೀಲರ್‌ಗಳಿಗೂ ಸಹಾಯಧನವನ್ನು ಏರಿಸಬೇಕು. ರೇಷ್ಮೆಯನ್ನು ಜಿಎಸ್‌ಟಿಯಿಂದ ಹೊರಗಿಡಬೇಕು ಎಂದು ತಿಳಿಸಿದರು. ಕೇಂದ್ರ ಜವಳಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಜಕ್ತಾ ಎಲ್. ವರ್ಮಾ ಮಾತನಾಡಿ, ಭಾರತದಲ್ಲಿ ವರ್ಷಕ್ಕೆ 39 ಟನ್ ರೇಷ್ಮೆ ಉತ್ಪಾದನೆಯಾಗುತ್ತಿದ್ದು, ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ರೇಷ್ಮೆ ಕೃಷಿ ಮತ್ತು ಉತ್ಪನ್ನಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡರೆ ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೆ ಭಾರತ ಏರಲಿದೆ ಎಂದು ತಿಳಿಸಿದರು.
ಕೇಂದ್ರ ಜವಳಿ ಸಚಿವಾಲಯದ ಕಾರ್ಯದರ್ಶಿ ರಚನಾ ಶಾ ಮಾತನಾಡಿ, 32 ದೇಶಗಳಿಗೆ ಭಾರತದಿಂದ ರೇಷ್ಮೆ ರಫ್ತು ಆಗುತ್ತಿದೆ. ₹ 2087 ಕೋಟಿ ರಫ್ತು ವಹಿವಾಟು ನಡೆಯುತ್ತಿದೆ. ರೇಷ್ಮೆಯಿಂದ ಬಟ್ಟೆಯ ಹೊರತಾಗಿ ಅನೇಕ ಉಪ ಉತ್ಪನ್ನಗಳನ್ನು ತಯಾರಿಸಲು ಸಾಧ್ಯ. ಅದಕ್ಕೆ ಸ್ಟಾರ್ಟ್‌ಅಪ್ ಸಹಿತ ಕೇಂದ್ರದ ಅನೇಕ ಯೋಜನೆಗಳ ಮೂಲಕ ಪ್ರೋತ್ಸಾಹ ನೀಡಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

