Breaking News

ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ: ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿ

ನವಲಗುಂದ: ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ, ಪೋಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ ಎಂದು ನವಲಗುಂದ ಪಂಚಗ್ರಹ ಹಿರೇಮಠ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.

ಅವರು ತಾಲ್ಲೂಕಿನ ಕುಮಾರಗೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಆರೇಕುರಹಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ಮುಂಬಿಕೊಳ್ಳುವ ವೇದಿಕೆಯಾಗಿದೆ. ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದವರೆಗೆ ಸ್ಪರ್ಧೆ ಇರುವುದರಿಂದ ಶಾಲೆ ಶಿಕ್ಷಕರು ಉತ್ತಮ ತರಬೇತಿ ನೀಡಿ ಸಜ್ಜುಗೊಳಿಸಬೇಕು ಎಂದು ಸಲಹೆ ನೀಡಿ ಆಶೀರ್ವದಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ ಮಲ್ಲಾಡ ಮಾತನಾಡಿ, ಪ್ರತಿಭೆ ಯಾರೂ ಸ್ವತ್ತೂ ಅಲ್ಲ. ಪ್ರತಿ ವರ್ಷ ಸರ್ಕಾರ ಮಕ್ಕಳಿಗಾಗಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮತ್ತಷ್ಟು ಉತ್ತೇಜನ ನೀಡುತ್ತಿದೆ ಎಂದರು.

Share News

About Shaikh BigTv

Check Also

ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಮಂಗಳೂರಿನ ಧರ್ಮಗುರು ವಿರುದ್ಧ ಮತ್ತೊಂದು ಕೇಸ್

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) …

Leave a Reply

Your email address will not be published. Required fields are marked *