ನವಲಗುಂದ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥೆಯಲ್ಲಿ ಕೆಲಸ ಮಾಡುವ ಸೇವಾ ಪ್ರತಿನಿಧಿಗಳು ವೀರೇಂದ್ರ ಹೆಗಡೆಯವರ ಆಶಯದಂತೆ ಗ್ರಾಮೀಣ ಜನರ ಬದುಕಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಅಭಿವೃದ್ಧಿಗೆ ಪೂರಕವಾದಂತ ಯೋಜನೆಯ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕ ಚಂದ್ರಶೇಖರ ಜೆ. ಹೇಳಿದರು.
ಪಟ್ಟಣದ ಶ್ರೀ ಅಜಾತ ನಾಗಲಿಂಗ ಸ್ವಾಮೀಜಿ ಮಠದಲ್ಲಿರುವ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಸೇವಾ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸೇವಾ ಪ್ರತಿನಿಧಿಗಳು ಸ್ವಸಾಯ ಸಂಘಗಳ ಬಲವರ್ಧನೆ ಹಾಗೂ ಅವರ ಬದುಕಿನ ಯೋಜನೆಗಳಿಗೆ ಸಂಸ್ಥೆಯ ಕಾರ್ಯಕ್ರಮ ಅನುಷ್ಠಾನಗೊಳಿಸುವ ಕೆಲಸ ಮಾಡಿ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

