Breaking News

ಕೃಷಿ ಮೇಳದ ಭಾಗವಾದ ಬೀಜ ಮೇಳವನ್ನು ಉದ್ಘಾಟಿಸಿದ ಜೋಶಿ

ಧಾರವಾಡ: ಧಾರವಾಡದ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯದಿಂದ ನಡೆಯುವ ಕೃಷಿ ಮೇಳದ ಭಾಗವಾದ ಬೀಜ ಮೇಳವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಉದ್ಘಾಟಿಸಿದರು.

ಬೀಜ ಮೇಳ ಉದ್ಘಾಟಿಸಿದ ನಂತರ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಾಕಲಾಗಿರುವ ವಿವಿಧ ಸ್ಟಾಲ್‌ಗಳಿಗೆ ಭೇಟಿ ನೀಡಿದ ಅವರು, ನೂತನವಾಗಿ ಆವಿಷ್ಕರಿಸಲಾದ ಕೃಷಿ ಯಂತ್ರ ಸೇರಿದಂತೆ ಇತ್ಯಾದಿ ಮಾಹಿತಿ ಪಡೆದುಕೊಂಡರು. ಭಾರತ ಸರ್ಕಾರ ಕೃಷಿಗೆ ನೀಡಿದ ಸೌಕರ್ಯಗಳ ಕುರಿತು ಹಾಕಲಾದ ಸ್ಟಾಲ್‌ಗಳಿಗೂ ಸಚಿವರು ಭೇಟಿ ನೀಡಿ ಪರಿಶೀಲಿಸಿದರು.

ಒಟ್ಟಾರೆ ಬೀಜ ಮೇಳ ಉದ್ಘಾಟಿಸಿದ ಕೇಂದ್ರ ಸಚಿವರು ಅದಾದ ಬಳಿಕ ವಿವಿಧ ಸ್ಟಾಲ್‌ಗಳಿಗೆ ಭೇಟಿ ಕೊಟ್ಟು ಮಾಹಿತಿ ಪಡೆದುಕೊಂಡರು. ಸಚಿವರಿಗೆ ಶಾಸಕ ಮಹೇಶ ಟೆಂಗಿನಕಾಯಿ, ಕೃಷಿ ವಿವಿ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸೇರಿದಂತೆ ಸಿಂಡಿಕೇಟ್ ಸದಸ್ಯರು ಸಾಥ್ ನೀಡಿದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *