ಧಾರವಾಡ: ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು 3 ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ಆಯೋಜಿಸಲಾಗಿದ್ದು. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಇರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು http://karnatakasahithyaacademy.org ವೆಬ್‍ಸೈಟ್ ಮೂಲಕ ಅಕ್ಟೋಬರ್ 8, 2024 ರೊಳಗಾಗಿ ಅರ್ಜಿಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22211730, 29601730, 22106460 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

