Breaking News

ಕೇಂದ್ರದ ಒಂದು ರಾಷ್ಟ್ರ, ಒಂದು ಚುನಾವಣೆ ವಿರುದ್ಧ ಇಂಡಿಯಾ ಮೈತ್ರಿ ಪಕ್ಷಗಳ ಬೆಂಬಲ ಕ್ರೂಢಿಕರಣ

ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವ ಕೇಂದ್ರದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯ ವಿರುದ್ಧ ಕಾಂಗ್ರೆಸ್ ತನ್ನ ನಿಲುವು ದೃಢಪಡಿಸುತ್ತಿದೆ ಮತ್ತು ಬೆಂಬಲ ಕ್ರೋಢೀಕರಿಸುತ್ತಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಎನ್ಡಿಎ ಲೋಕಸಭೆಯಲ್ಲಿ ಅಗತ್ಯ ಸಂಖ್ಯೆ ಬಲ ಹೊಂದಿಲ್ಲ. ಅಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೆ ಸಾಂವಿಧಾನಿಕ ತಿದ್ದುಪಡಿ ಮಂಡಿಸಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. 543 ಸಂಖ್ಯಾಬಲದ ಲೋಕಸಭೆಯಲ್ಲಿ ಎನ್ಡಿಎ ಕೇವಲ 293 ಸದಸ್ಯರನ್ನು ಹೊಂದಿದೆ. ಆದರೆ, ಸಾಂವಿಧಾನಿಕ ತಿದ್ದುಪಡಿ ಮಾಡಲು 362 ಸದಸ್ಯರ ಮತಗಳು ಅಗತ್ಯವಿದೆ.
ಲೋಕಸಭೆಯಲ್ಲಿ ಎನ್ಡಿಎಗೆ ಸಂಖ್ಯಾಬಲ ಇಲ್ಲ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ, ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು ಇಂತಹ ಯಾವುದೇ ಮಸೂದೆಯನ್ನು ತಂದರೆ ಅದು ತೀವ್ರ ವಿರೋಧ ಎದುರಿಸಬೇಕಾಗುತ್ತದೆ. ಈ ವಿಷಯದ ಕುರಿತು ನಾವು ಸದನದಲ್ಲಿ ಇಂಡಿಯಾ ಮೈತ್ರಿ ಪಕ್ಷಗಳ ಬೆಂಬಲ ಕ್ರೋಢೀಕರಿಸುತ್ತೇವೆ. ಇದು ಅಪ್ರಾಯೋಗಿಕ ಕಲ್ಪನೆ ಎಂದು ನಾವು ನಂಬುತ್ತೇವೆ ಎಂದು ಲೋಕಸಭೆ ಸಂಸದೆ ಪ್ರಣಿತಿ ಶಿಂಧೆ ತಿಳಿಸಿದ್ದಾರೆ.
ಚುನಾವಣೆ ಬಂದಾಗಲೆಲ್ಲ ಅವರು ಈ ರೀತಿಯ ವಿಚಾರಗಳನ್ನು ಪ್ರಸ್ತುತಪಡಿಸುತ್ತಾರೆ. ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ ಮತ್ತು ಜಾರ್ಖಂಡ್ನಲ್ಲಿ ಅಸೆಂಬ್ಲಿ ಚುನಾವಣೆಗಳನ್ನು ಒಟ್ಟಿಗೆ ಏಕೆ ನಡೆಸಲಾಗಲಿಲ್ಲ. ಇದೆಲ್ಲವೂ ಉದ್ಯೋಗಗಳು ಮತ್ತು ಹೆಚ್ಚಿನ ಬೆಲೆಗಳ ಸಮಸ್ಯೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಾಗಿದೆ ಎಂದು ಎಐಸಿಸಿ ಕಾರ್ಯಾಧ್ಯಕ್ಷ ಅಜೋಯ್ ಕುಮಾರ್ ಹೇಳಿದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *