ಬೆಳಗಾವಿ: ಬೆಳಗಾವಿ ನಗರದ ಓಲ್ಡ್ ಪಿಬಿ ರಸ್ತೆಯಿಂದ ಖಾನಾಪುರ ಸಂಪರ್ಕಿಸುವ ರಸ್ತೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಡಾಂಬರ್ ಹಾಕಿ ಅಭಿವೃದ್ಧಿಪಡಿಸಲಾಗಿತ್ತು. ಸವಾರರು ಕೂಡ ನೆಮ್ಮದಿಯಾಗಿ ಓಡಾಡುತ್ತಿದ್ದರು. ಆದರೆ, ಹಾಗೆ ರಸ್ತೆ ನಿರ್ಮಾಣವಾದ ಮೂರು ವರ್ಷದ ಬಳಿಕ ಇದೀಗ ಬಂದ್ ಆಗಿದೆ, ಮಾಲೀಕನ ಅನುಮತಿ ಪಡೆಯದೇ 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದರಿಂದ ರಸ್ತೆ ಮತ್ತೆ ಮಾಲೀಕನ ಪಾಲಾಗಿದೆ. ಅಧಿಕಾರಿಗಳ ಅವಾಂತರದಿಂದ ಪಾಲಿಕೆಗೆ 9 ಕೋಟಿ ರೂ. ನಷ್ಟವಾಗಿದೆ.
ಸದ್ಯ 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ರಸ್ತೆಯನ್ನು ಜಾಗ ಸಮೇತ ಮಾಲೀಕನ ಸುಪರ್ದಿಗೆ ವಾಪಸ್ ಕೊಡಲಾಗಿದೆ. ಮಾಲೀಕನ ಅನುಮತಿ ಇಲ್ಲದೇ ರಸ್ತೆ ನಿರ್ಮಾಣ ಮಾಡಿದ್ದು, ಹೇಳದೇ ಕೇಳದೆ 21.65 ಗುಂಟಾ ಜಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆ ಮಾಡಿದ್ದು ಮುಳುವಾಗಿದೆ.
ಅಧಿಕಾರಿಗಳ ಒಂದು ಯಡವಟ್ಟು ಸಾರ್ವಜನಿಕರ ತೆರಿಗೆ ಹಣ ಪೋಲಾಗುವಂತೆ ಮಾಡಿದೆ. ಇತ್ತ ಕೋರ್ಟ್ ಸಮಯ ಕೂಡ ಹಾಳು ಮಾಡಿದ್ದು ಇದು ಕೂಡ ಅಧಿಕಾರಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೋಮವಾರ ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಹೈಕೋರ್ಟ್ ನಲ್ಲಿ ದಾಖಲೆ ಸಲ್ಲಿಸಲಿದ್ದಾರೆ. ಹೀಗಾಗಿ ತಪ್ಪು ಎಸಗಿದ ಅಧಿಕಾರಿಗಳಿಗೆ ಸರ್ಕಾರವೇ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

