Breaking News

ವಕ್ಫ್ ಮಸೂದೆ ತಿದ್ದುಪಡಿ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾದ ಕೇಂದ್ರಸರ್ಕಾರ

ವಿಜಯಪುರ: ದೇಶಾದ್ಯಂತ ಇರುವ ವಕ್ಫ್ ಆಸ್ತಿಗಳು ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ತಿದ್ದುಪಡಿ ಮಾಡುವ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಮೈಸೂರು ಭಾಗದಲ್ಲಿ ಒಂದಿಷ್ಟು ಹೊರತುಪಡಿಸಿದರೇ ಅತ್ಯಂತ ಹೆಚ್ಚು ವಕ್ಫ್ ಆಸ್ತಿ ಇರುವುದೇ ಉತ್ತರ ಕರ್ನಾಟಕ ಭಾಗದಲ್ಲಿ ಎಂಬುದು ಬೆಳಕಿಗೆ ಬಂದಿದೆ.
ಈ ಪೈಕಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿರುವ ಕಲಬುರಗಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 2ನೇ ಸ್ಥಾನದಲ್ಲಿರುವ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿಯೂ ವಕ್ಫ್ ಆಸ್ತಿ ಹೇರಳವಾಗಿದ್ದು, ಬೀದರ್ ಜಿಲ್ಲೆ 3ನೇ ಸ್ಥಾನದಲ್ಲಿದೆ.
ರಾಜ್ಯದ ಬಹುತೇಕ ಭಾಗದಲ್ಲಿ ವಕ್ಫ್ ಆಸ್ತಿ ಇದ್ದರೂ ಸಹ ಉತ್ತರ ಕರ್ನಾಟಕದ ಭಾಗದಲ್ಲಿ ಮುಸ್ಲಿಂ ದೊರೆಗಳ ಆಡಳಿತ ಹೆಚ್ಚಾಗಿಯೇ ಇದ್ದುದರಿಂದ ಸಹಜವಾಗಿಯೇ ವಕ್ಫ್ ಆಸ್ತಿಯೂ ಕೂಡ ಇದೇ ಭಾಗದಲ್ಲಿ ಹೆಚ್ಚಿದೆ. ಮುಸ್ಲಿಂ ವ್ಯಕ್ತಿಗಳು ದಾನವಾಗಿ ನೀಡಲಾಗಿರುವ ಆಸ್ತಿಗಳು ಈ ಭಾಗದಲ್ಲೇ ಕಂಡು ಬರುತ್ತವೆ. ನೂರಾರು ವರ್ಷಗಳ ಕಾಲ ಆಳಿದ ಮುಸ್ಲಿಂ ದೊರೆಗಳ ಆಡಳಿತದ ಕೇಂದ್ರಗಳಲ್ಲಿಯೇ ವಕ್ಫ್ ಆಸ್ತಿಗಳು ಹೆಚ್ಚಾಗಿ ಕಂಡು ಬಂದಿವೆ ಎಂದು ತಿಳಿಸಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *