Breaking News

ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಮನವಿ

ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ತಿರುಪತಿ ಲಡ್ಡು ಪ್ರಕರಣ ಇದೀಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು, ಮೀನೆಣ್ಣೆ ಬೆರೆಕೆ ಮಾಡಿದ್ದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇನ್ನು ಮತ್ತೊಂದೆಡೆ ಇದೀಗ ಕರ್ನಾಟಕದ ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್​​ ಬಂದಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಇ-ಮೇಲ್​​​ ಮೂಲಕ ಮನವಿ ಸಲ್ಲಿಸಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಕೆಎಂಎಫ್​​ ಎಂಡಿ ಜಗದೀಶ್​ ರಾಜ್ಯದ ಮುಜರಾಯಿ ದೇಗುಲಗಳಿಗೆ ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಪ್ರತಿದಿನ 15 ಲಕ್ಷ ಲೀಟರ್ ಹಾಲಿನಿಂದ ತುಪ್ಪ ತಯಾರಿಸಲು ಸಿದ್ಧತೆ ನಡೆಯುತ್ತಿದೆ. ಟಿಟಿಡಿಗೆ ತೆರಳುವ ನಂದಿನಿ ತುಪ್ಪದ ವಾಹನಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ ಜಿ ಪಿ ಎಎಸ್ ಟ್ರ್ಯಾಕ್, ಎಲೆಕ್ಟ್ರಿಕ್​ ಡೋರ್ ವ್ಯವಸ್ಥೆ ಮಾಡಿಸಲಾಗುತ್ತಿದೆ ಎಂದು ತಿಳಿಸಿದರು.
ಲ್ಯಾಬ್​ ಟೆಸ್ಟ್​ ಮಾಡಿದ ಬಳಿಕ ನಂದಿನಿ ತುಪ್ಪ ಪೂರೈಸಲಾಗುತ್ತೆ. ಈ ಹಿಂದೆ ಇದ್ದ ಸರ್ಕಾರದಲ್ಲಿ ಟಿಟಿಡಿಗೆ ತುಪ್ಪ ಪೂರೈಕೆ ಮಾಡಿರಲಿಲ್ಲ. ಇದೀಗ ಟಿಟಿಡಿ ಬೇಡಿಕೆ ಮೇರೆಗೆ ನಂದಿನಿ ತುಪ್ಪ ಪೂರೈಕೆ ಮಾಡ್ತಿದ್ದೇವೆ. ಹಿಂದೆ ತಿರುಪತಿಗೆ ಯಾಕೆ ತುಪ್ಪ ಪೂರೈಸುತ್ತಿಲ್ಲ ಎಂದು ಕೇಳುತ್ತಿದ್ದರು. ಇಂದು ತಿಮ್ಮಪ್ಪನ ಕೃಪೆಯಿಂದ ಹೆಚ್ಚು ತುಪ್ಪ ಪೂರೈಕೆ ಮಾಡುತ್ತಿದ್ದೇವೆ. ಇದು ಕೆಎಂಎಫ್​​ನ ಹೆಮ್ಮೆಯ ವಿಚಾರ ಎಂದು ಕೆಎಂಎಫ್​​ ಎಂಡಿ ಜಗದೀಶ್​ ತಿಳಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *