Breaking News

2 ಎ ಮೀಸಲಾತಿ ಕುರಿತು ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಸರಕಾರ ಮತ್ತು ಮುಖ್ಯಮಂತ್ರಿಗಳು ಶಾಸಕರ ಹಾಗೂ ಸ್ಚಾಮೀಜಿಗಳ ಮಾತಿಗೆ ಬೆಲೆ ಕೊಡಲಿಲ್ಲ. ಈಗ ವಕೀಲರ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮೀಸಲಾತಿ ಸಂಬಂಧ ಶೀಘ್ರದಲ್ಲೇ ಸಿಎಂ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.
ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಭೆಯ ದಿನಾಂಕ, ಸಮಯ ನಿಗದಿ ಮಾಡದೆ ಇದ್ದರೆ ಉಗ್ರ ಹೋರಾಟ ಮಾಡಲಾಗುದು ಎಂದು ಎಚ್ಚರಿಕೆ ನೀಡಿದರು.
ಮೀಸಲಾತಿಗಾಗಿ ಸರ್ಕಾರ ಮೇಲೆ ಒತ್ತಡ ತರಲು ಪ್ರಥಮ ಬಾರಿಗೆ ರಾಜ್ಯಮಟ್ಟದ ವಕೀಲರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *