ಬ್ಯಾಡಗಿ: ಊಟ ಮಾಡಿ ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಇಬ್ಬರು ಕಾರ್ಮಿಕರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ರೋಡ್ ರೋಲರ್ ಹರಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮೋಟೆಬೆನ್ನೂರು ಬಳಿ ನಡೆದಿದೆ.
ಅಳಲಗೇರಿ ಗ್ರಾಮದ ಸಿದ್ದು ಕಿಳ್ಳಿಕ್ಯಾತರ (24) ಮತ್ತು ಪ್ರೀತಮ ಕಿಳ್ಳಿಕ್ಯಾತರ (24) ಮೃತಪಟ್ಟವರು. ಇವರು ಊಟ ಮಾಡಿ ರಸ್ತೆ ಪಕ್ಕ ಮಲಗಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದ್ದು, ಸಂಬಂಧಪಟ್ಟ ಗುತ್ತಿಗೆದಾರರು ಸ್ಥಳಕ್ಕೆ ಬರುವವರೆಗೂ ಮೃತದೇಹದ ಸ್ಥಳದಿಂದ ಎತ್ತುವುದಿಲ್ಲ ಹಾಗೂ ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಧರಣಿ ನಡೆಸಿದ್ದಾರೆ. ವಿಷಯ ತಿಳಿದ ತಕ್ಷಣ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ದುರಂತದಲ್ಲಿ ಸಾವಿಗಿಡಾದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಬ್ಯಾಡಗಿ ಪೊಲೀಸರು ದೂರು ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

