Breaking News

ಚೀನಾ ಕ್ವಾಡ್‌ ಸದಸ್ಯ ರಾಷ್ಟ್ರಗಳನ್ನು ಪರೀಕ್ಷಿಸುತ್ತಿದೆ: ಅಮೆರಿಕ ಅಧ್ಯಕ್ಷ ಬೈಡನ್

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು, ಚೀನಾ ಕ್ವಾಡ್‌ ಸದಸ್ಯ ರಾಷ್ಟ್ರಗಳನ್ನು ಪರೀಕ್ಷಿಸುತ್ತಿದೆ ಎಂದು ಹೇಳಿರುವುದು ಹಾಟ್‌ ಮೈಕ್‌ನಲ್ಲಿ ಸೆರೆಯಾಗಿದೆ. ಚೀನಾ ಶಕ್ತಿಶಾಲಿಯಾಗಿ ಹೊರಹೊಮ್ಮುತ್ತಿರುವುದನ್ನು ಅಮೆರಿಕ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಎಂಬುದು ಇದರಿಂದ ಬಹಿರಂಗವಾಗಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಹಾಗೂ ಜಪಾನ್‌ ಪ್ರಧಾನಿ ಫುಮಿಯೊ ಕಿಶಿದಾ ಅವರು ಹಾಜರಿದ್ದ ಕ್ವಾಡ್‌ ಶೃಂಗ ಸಭೆಯಲ್ಲಿ ಬೈಡನ್‌ ಹೇಳಿಕೆ ಪ್ರಕಟವಾಗಿದೆ.
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ದೇಶೀಯ ಆರ್ಥಿಕ ಸವಾಲುಗಳು ಹಾಗೂ ಪ್ರಕ್ಷುಬ್ಧತೆಯನ್ನು ನಿಯಂತ್ರಿಸುವುದರ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ ಎಂದು ಭಾವಿಸಿದ್ದೇವೆ. ಚೀನಾ ಅಧ್ಯಕ್ಷರು ರಾಜತಾಂತ್ರಿಕ ಅವಕಾಶಗಳನ್ನೇ ಖರೀದಿಸಲು ನೋಡುತ್ತಿದ್ದಾರೆ. ದೇಶದ ಹಿತದೃಷ್ಟಿಯಿಂದ ಅವರು ಆಕ್ರಮಣಕಾರಿಯಾಗಿ ಸಾಗುತ್ತಿದ್ದಾರೆ ಎಂದು ನನಗನಿಸುತ್ತಿದೆ ಎಂದಿದ್ದಾರೆ, ಆಕ್ರಮಣಕಾರಿಯಾಗಿ ನಡೆದುಕೊಳ್ಳುವುದು ಇಂಡೋ ಪೆಸಿಫಿಕ್‌ ಭಾಗದ ನಮ್ಮನ್ನೆಲ್ಲ ಆರ್ಥಿಕತೆ, ತಂತ್ರಜ್ಞಾನ ಸೇರಿದಂತೆ ವಿವಿಧ ರೀತಿಯಲ್ಲಿ ಪರೀಕ್ಷಿಸುತ್ತಿದೆ. ಅದೇ ವೇಳೆ, ತೀವ್ರ ಸ್ಪರ್ಧೆಗೆ ತೀವ್ರ ರಾಜತಾಂತ್ರಿಕತೆ ಅಗತ್ಯವಾಗುತ್ತದೆ ಎಂಬುದನ್ನು ನಂಬಿದ್ದೇವೆ ಎಂದು ಬೈಡನ್ ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *