Breaking News

ಬೆಂಗಳೂರಿನ ಯಲಹಂಕದಲ್ಲಿ ಕರ್ನಾಟಕದ ಮೊದಲ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಉದ್ಘಾಟನೆಗೆ ಸಿದ್ಧ

ಬೆಂಗಳೂರು: ಕರ್ನಾಟಕದ ಮೊದಲ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಬೆಂಗಳೂರಿನ ಯಲಹಂಕದಲ್ಲಿ ಉದ್ಘಾಟನೆಗೆ ಅಣಿಯಾಗಿದೆ. ಸುಮಾರು 370 ಮೆಗಾವ್ಯಾಟ್‌ ವಿದ್ಯುತ್‌ ಅನ್ನು ಅನಿಲ ಬಳಸಿ ಉತ್ಪಾದನೆ ಮಾಡುವ ಪ್ರಯೋಗ ಬಹುತೇಕ ಯಶಸ್ವಿಯಾಗಿದ್ದು, ಇನ್ನು ಎರಡು ದಿನದಲ್ಲಿ ಅಧಿಕೃತವಾಗಿ ವಿದ್ಯುತ್‌ ಉತ್ಪಾದನೆ ಶುರುವಾಗಲಿದೆ.
ಯಲಹಂಕ ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್ ಸೆಪ್ಟೆಂಬರ್ 24 ರಂದು ಯಲಹಂಕದಲ್ಲಿ ಕಾರ್ಯಾರಂಭ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಾವರವನ್ನು ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ಸ್ಥಾಪಿಸಿದ ಈ ಸ್ಥಾವರವು ಗ್ಯಾಸ್ ಟರ್ಬೈನ್ ಜನರೇಟರ್‌ನಿಂದ 236.825 ಮೆಗಾವ್ಯಾಟ್ ಮತ್ತು ಸ್ಟೀಮ್ ಟರ್ಬೈನ್ ಜನರೇಟರ್‌ನಿಂದ 133.225 ಮೆಗಾವ್ಯಾಟ್ ಉತ್ಪಾದಿಸುತ್ತದೆ. ಒಟ್ಟು ಸಾಮರ್ಥ್ಯ 370.05 ಮೆಗಾವ್ಯಾಟ್. ಸಂಯೋಜಿತ ಪೈಲಟ್ ಉತ್ಪಾದನಾ ಪ್ರಕ್ರಿಯೆಯು ಈಗಾಗಲೇ ಪೂರ್ಣಗೊಂಡಿದೆ. ಉದ್ಘಾಟನೆಯಾದ ನಂತರ ಹಂತ ಹಂತವಾಗಿ ಉತ್ಪಾದನಾ ಪ್ರಮಾಣವನ್ನು ಹಚ್ಚಿಸಲಾಗುತ್ತದೆ. ಕರ್ನಾಟಕದಲ್ಲಿ ಜಲ, ಕಲ್ಲಿದ್ದಲು ಆಧರಿತ ವಿದ್ಯುತ್‌ ಉತ್ಪಾದನೆ ಘಟಕಗಳು ಇವೆ. ಮೊದಲ ಅನಿಲ ಆಧರಿತ ವಿದ್ಯುತ್‌ ಉತ್ಪಾದನೆ ಘಟಕ ಇದಾಗಲಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *