Breaking News

ಡಿಸಿಎಂ ಡಿ.ಕೆ.ಶಿವಕುಮಾರ್ ರಿಂದ 200 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ

ಚನ್ನಪಟ್ಟಣ : 2,069 ಅರ್ಜಿದಾರರಿಗೆ ನಿವೇಶನ, 2,300 ವಸತಿ ವಿತರಣೆ ಹಾಗೂ 200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುವ ಸಂಕಲ್ಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು.
ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಟ್ಟೆಕೆರೆಯ ಕುಡಿಯುವ ನೀರಿನ ಕಟ್ಟೆ ಬಳಿ ಸುಮಾರು ₹9 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ಮೂಲಕ ಡಿಸಿಎಂ ತಮ್ಮ ಅಭಿವೃದ್ಧಿಯ ಅಭಿಯಾನ ಪ್ರಾರಂಭ ಮಾಡಿದರು.
ಚನ್ನಪಟ್ಟಣ ನಗರ ನಿವಾಸಿಗಳಿಗೆ ಪಟ್ಟಣ ವ್ಯಾಪ್ತಿಯಲ್ಲಿ ಇರುವ ಐಡಿಎಸ್ ಎಸ್ ಎಂಟಿ ಲೇಔಟ್‌ ಬಳಿ 10 ಎಕರೆ 6 ಗುಂಟೆ ವಿಸ್ತೀರ್ಣದಲ್ಲಿ ನಿವೇಶನಗಳನ್ನು ವಿತರಿಸಲು ಲಾಟರಿ ಮೂಲಕ ಫಲನುಭವಿಗಳನ್ನು ಆಯ್ಕೆ ಮಾಡಿ 300 ನಿವೇಶನ ಹಾಗೂ ಪಟ್ಲು ಗ್ರಾಮದಲ್ಲಿ 500 ನಿವೇಶನಗಳು ನಗರ ಆಶ್ರಯ ಸಮಿತಿ ಮತ್ತು ರಾಜೀವ್‌ ಗಾಂಧಿ ವಸತಿ ನಿಗಮದ ಮೂಲಕ ಹಂಚಲಾಯಿತು, ಇದರ ಜೊತೆಗೆ 2,300 ಮನೆಗಳನ್ನು ವಸತಿ ರಹಿತರಿಗೆ ಬಸವ ವಸತಿ ಯೋಜನೆ & ಅಂಬೇಡ್ಕರ್‌ ವಸತಿ ಯೋಜನೆಯಡಿ ಮನೆ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು ಎಂದು ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *