Breaking News

ಈ ಚುನಾವಣೆಯ ಮೂಲಕ 3 ಕುಟುಂಬಗಳ ಆಡಳಿತ ಕೊನೆಯಾಗಲಿದೆ: ಕೇಂದ್ರ ಸಚಿವ ಅಮಿತ್ ಶಾ

ಜಮ್ಮುಮತ್ತು ಕಾಶ್ಮೀರ: ಈ ಚುನಾವಣೆಯು ಜಮ್ಮುಕಾಶ್ಮೀರದಲ್ಲಿ 3 ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ. ಅಬ್ದುಲ್ಲಾ ಕುಟುಂಬ, ಮುಫ್ತಿ ಕುಟುಂಬ ಮತ್ತು ನೆಹರು ಗಾಂಧಿ ಕುಟುಂಬದ ಆಡಳಿತ ಈ ಚುನಾವಣೆಯ ಮೂಲಕ ಕೊನೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭವಿಷ್ಯ ನುಡಿದಿದ್ದಾರೆ.
ಎರಡನೇ ಹಂತದ ವಿಧಾನಸಭಾ ಚುನಾವಣೆಗೂ ಮುನ್ನ ಶಾ ಜಮ್ಮು ಕಾಶ್ಮೀರದ ಮೆಂಧರ್ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಮೂರು ಕುಟುಂಬಗಳು ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದ್ದವು. ಒಂದು ವೇಳೆ 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರದೇ ಇರುತ್ತಿದ್ದರೆ ಆಗ ಪಂಚಾಯಿತಿ, ಬ್ಲಾಕ್ ಮತ್ತು ಜಿಲ್ಲಾ ಚುನಾವಣೆಗಳು ನಡೆಯುತ್ತಿರಲಿಲ್ಲ ಎಂದು ಶಾ ಹೇಳಿದ್ದಾರೆ.
1947ರಿಂದ ಪಾಕಿಸ್ತಾನದ ವಿರುದ್ಧ ಹೋರಾಡಿದ ಪ್ರತಿಯೊಂದು ಯುದ್ಧದಲ್ಲಿ, ಈ ನೆಲ, ಜಮ್ಮು ಮತ್ತು ಕಾಶ್ಮೀರದ ಸೈನಿಕರು ಭಾರತವನ್ನು ರಕ್ಷಿಸಿದ್ದಾರೆ. ಜಮ್ಮು ಕಾಶ್ಮೀರದ ಈ ಚುನಾವಣೆ ಇಲ್ಲಿನ ಮೂರು ಕುಟುಂಬಗಳ ಆಡಳಿತವನ್ನು ಕೊನೆಗೊಳಿಸುವ ಚುನಾವಣೆಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ನಾನು ಸಂಸತ್ತಿನಲ್ಲಿ ಅದರ ಮಸೂದೆಯನ್ನು ಮಂಡಿಸಿದಾಗ ಫಾರೂಕ್ ಅಬ್ದುಲ್ಲಾ ಅವರ ಪಕ್ಷವು ಅದನ್ನು ವಿರೋಧಿಸಿತು ಮತ್ತು ಇಲ್ಲಿ ಗುಜ್ಜರ್ ಸಹೋದರರನ್ನು ಪ್ರಚೋದಿಸಲು ಪ್ರಾರಂಭಿಸಿತು. ಆಗ ನಾನು ಮೀಸಲಾತಿ ನೀಡುತ್ತೇವೆ ಎಂದು ಭರವಸೆ ನೀಡಿದ್ದೆ. ನಾವು ಆ ಭರವಸೆಯನ್ನು ಈಡೇರಿಸಿದ್ದೇವೆ ಎಂದು ಅಮಿತ್ ಶಾ ಘೋಷಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *