Breaking News

ಕ್ವಾಡ್‌ ಶೃಂಗಸಭೆ: ಜಪಾನ್, ಆಸ್ಟ್ರೇಲಿಯಾ ಪ್ರಧಾನಿಗಳ ಜತೆ ಮೋದಿ ದ್ವಿಪಕ್ಷೀಯ ಮಾತುಕತೆ

ವಿಲ್ಮಿಂಗ್ಟನ್‌ : ಅಮೆರಿಕದಲ್ಲಿ ನಡೆಯುತ್ತಿರುವ ಕ್ವಾಡ್ ಶೃಂಗಸಭೆಯ ವೇಳೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್‌ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಮಾಹಿತಿ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು. ವ್ಯಾಪಾರ, ಭದ್ರತೆ, ಬಾಹ್ಯಾಕಾಶ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಇನ್ನಷ್ಟು ಗತಿ ಪಡೆಯಲು ಪರಿಶ್ರಮಿಸುತ್ತೇವೆ. ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಭಾರತ ಸದಾ ಗೌರವಿಸುತ್ತದೆ ಎಂದು ಅವರು ಹೇಳಿದ್ದಾರೆ.
ಇನ್ನೊಂದು ಪೋಸ್ಟ್ ನಲ್ಲಿ ಜಪಾನ್‌ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಮೂಲಸೌಕರ್ಯ, ಸೆಮಿಕಂಡಕ್ಟರ್, ರಕ್ಷಣಾ ವಲಯ, ಗ್ರೀನ್ ಎನರ್ಜಿ ಮತ್ತು ಇತರೆ ವಿಷಯಗಳಲ್ಲಿ ಉಭಯ ದೇಶಗಳ ಸಹಕಾರದ ಕುರಿತು ಚರ್ಚಿಸಲಾಯಿತು. ಭಾರತ ಜಪಾನ್ ನಡುವಣ ಗಟ್ಟಿ ಬಾಂಧವ್ಯವು ಜಾಗತಿಕ ಏಳಿಗೆಗೆ ಪೂರಕವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *