Breaking News

ಸೇನಾ ಯೋಧರಿದ್ದ ರೈಲು ದುರಂತಕ್ಕೆ ಸಂಚು: ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಅವಘಡ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ರೈಲುಗಳನ್ನು ಗುರಿಯಾಗಿಸಿ ಕಿಡಿಗೇಡಿಗಳು ದುಷ್ಕೃತ್ಯಕ್ಕೆ ಯತ್ನಿಸುತ್ತಿರುವ ಘಟನೆಗಳು ಆಗಾಗ ಬೆಳಕಿಗೆ ಬರುತ್ತಿವೆ. ಇದೀಗ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶದಲ್ಲಿ ರೈಲು ದುರಂತಕ್ಕೆ ಸಂಚು ರೂಪಿಸಿದ್ದು, ಅದೃಷ್ಟವಶಾತ್‌ ಅಧಿಕಾರಿಗಳ ಸಮಯಪ್ರಜ್ಞೆಯಿಂಧ ಅವಘಡವೊಂದು ತಪ್ಪಿದೆ.
ಮದ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಸೇನಾ ಯೋಧರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿ ಭಾರೀ ‍ಸ್ಫೋಟಕ್ಕೆ ಸಂಚು ರೂಪಿಸಿರುವ ವಿಚಾರ ಬೆಳಕಿಗೆ ಬಂದಿದೆ. ಸಗ್ಪಥಾ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸೇನೆಯ ವಿಶೇಷ ರೈಲೊಂದು ಜಮ್ಮು ಕಾಶ್ಮೀರದಿಂದ ಕರ್ನಾಟಕಕ್ಕೆ ಹೊರಟಿತ್ತು. ಈ ರೈಲನ್ನು ಗುರಿಯಾಗಿಸಿ ಕಿಡಿಗೇಡಿಗಳು ‍ಸ್ಫೋಟಕ್ಕೆ ಸಂಚು ರೂಪಿಸಿದ್ದರು. ರೈಲ್ವೇ ಹಳಿಯುದ್ದಕ್ಕೂ ಸ್ಫೋಟಕಗಳನ್ನು ಅಳವಡಿಸಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿಕೊಂಡಿದ್ದರು. ಸ್ಫೋಟಕಗಳ ಮೇಲೆ ರೈಲು ಹೋಗುತ್ತಿದ್ದಂತೆ ಲೋಕೋ ಪೈಲಟ್‌ಗೆ ಇದರ ಅರಿವಾಗಿದ್ದು, ತಕ್ಷಣ ರೈಲನ್ನು ನಿಲ್ಲಿಸಿದ್ದಾರೆ. ಅದೃಷ್ಟವಶಾತ್‌ ಯಾರಿಗೂ ಗಾಯಗಳಾಗಿಲ್ಲ. ಸ್ಥಳಕ್ಕೆ ಭಯೋತ್ಪಾದಕ ನಿಗ್ರಹ ದಳ ಮತ್ತು ಎನ್‌ಐಎ ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *