Breaking News

ರಾಜ್ಯದಲ್ಲಿ ತಯಾರಾಗುವ ವಿವಿಧ ಕಂಪನಿಯ ತುಪ್ಪವನ್ನು ಪರೀಕ್ಷಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ವಿಚಾರ ದೇಶದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
ಲಡ್ಡು ತಯಾರಿಕೆಯಲ್ಲಿ ಈ ಹಿಂದೆ ಬಳಸಿರುವ ತುಪ್ಪ ಕಲಬೆರಕೆಯಿಂದ ಕೂಡಿತ್ತು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಜಾಗೃತಗೊಂಡ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತಯಾರಾಗುವ ವಿವಿಧ ಕಂಪನಿಯ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ. ಇಲ್ಲಿ ತಯಾರಾಗುವ ಮತ್ತು ಮಾರಾಟ ಮಾಡುತ್ತಿರುವ ವಿವಿಧ ಕಂಪನಿಯ ತುಪ್ಪಗಳನ್ನು ಪರೀಕ್ಷೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಆಹಾರ ಸುರಕ್ಷಿತ ಹಾಗೂ ಗುಣಮಟ್ಟ ಇಲಾಖೆಗೆ ಆದೇಶಿಸಿದ್ದಾರೆ.
ತ್ವರಿತಗತಿಯಲ್ಲಿ ವಿವಿಧ ಕಂಪನಿಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ, ವರದಿ ಬಂದ ಬಳಿಕ ಇವುಗಳಲ್ಲಿ ಕಲಬೆರಕೆ ಕಂಡು ಬಂದಲ್ಲಿ, ಕೂಡಲೇ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಸಚಿವರ ಆದೇಶ ಬೆನ್ನಲ್ಲೇ ವಿವಿಧ ಕಂಪನಿಗಳ ತುಪ್ಪದ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಜೊತೆಗೆ ರಾಜ್ಯದ ದೇವಸ್ಥಾನಗಳಲ್ಲಿ ತುಪ್ಪದಿಂದ ತಯಾರಾಗುವ ಪ್ರಸಾದಗಳ ಮಾದರಿಯನ್ನೂ ಆಹಾರ ಇಲಾಖೆ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ತಯಾರಿ ನಡೆಸಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *