ಧಾರವಾಡ: ಸಿಡಿಲಿಗೆ ಓರ್ವ ರೈತ ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ಹನುಮನಹಾಳ ಗ್ರಾಮದಲ್ಲಿ ನಡೆದಿದೆ.
ಭೀಮನಗೌಡ ಮಲ್ಲನಗೌಡ ಪಾಟೀಲ (65) ಎಂಬುವವರೇ ಸಿಡಿಲಿಗೆ ಬಲಿಯಾದವರು. ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ವಿಪರೀತ ಮಳೆಯಾಗಲು ಆರಂಭಿಸಿದ್ದರಿಂದ ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ಮರಳಿ ಮನೆ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಗರಗ ಠಾಣೆ ಪಿಎಸ್‌ಐ ಭೇಟಿ ನೀಡಿ ಪರಿಶೀಲಿಸಿ, ದೂರು ದಾಖಲಿಸಿಕೊಂಡಿದ್ದಾರೆ. ನಂತರ ಭೀಮನಗೌಡ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

