ಮೈಸೂರು: ಮದುವೆ ಮತ್ತು ಮೋಜಿಗಾಗಿ ಫೋಟೋ ತೆಗೆಸಿಕೊಳ್ಳುವವರಿಗೆ, ಪ್ರವಾಸಿಗರಿಗೆ ಮುದ ನೀಡುತ್ತಿದ್ದ ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿನ ಪಾರಿವಾಳಗಳಿಗೆ ಸೋಮವಾರದಿಂದ ಕಾಳು ಹಾಕುವ ಪದ್ಧತಿ ನಿಲ್ಲಿಸಲಾಗಿದೆ.
ಪಾರಿವಾಳಗಳು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಗೂಡು ಕಟ್ಟಿ ಅಲ್ಲಿಯೇ ಹಿಕ್ಕೆ ಹಾಕುವುದರಿಂದ ಕಟ್ಟಡಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಡೆದ ನಾಗರಿಕರ ಸಭೆ, ಸಂವಾದದ ಯಶಸ್ವಿಯಾಗಿ ಹಲವು ದಿನಗಳಿಂದ ಪರ ವಿರೋಧಕ್ಕೆ ಎಡೆಮಾಡಿಕೊಟ್ಟಿದ್ದ ಸಮಸ್ಯೆಯನ್ನು ಮಾತುಕತೆಯ ಮೂಲಕ ಪರಿಹರಿಸುವಲ್ಲಿ ಯಶಸ್ವಿಯಾಯಿತು.
ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪಾರಂಪರಿಕ ಕಟ್ಟಡ ತಜ್ಞರು ಮತ್ತು ನಗರದ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಇತಿಹಾಸ ತಜ್ಞ ಪ್ರೊ.ಎನ್.ಎಸ್. ರಂಗರಾಜು ಮಾತನಾಡಿ, ಪಾರಿವಾಳಗಳ ಹಿಕ್ಕೆಯಿಂದ ಸುತ್ತಮುತ್ತಲಿನ ಪ್ರತಿಮೆಗಳು, ಅರಮನೆಗೆ ತೊಂದರೆಯಾಗುತ್ತಿದೆ. ಪಾರಿವಾಳಗಳಿಗೆ ಅರಮನೆ ಮುಂಭಾಗ ಆಹಾರ ನೀಡುವುದನ್ನು ನಿಲ್ಲಿಸಬೇಕು. ಇಕ್ಕೆಯಿಂದ ಬಿಡುಗಡೆಯಾಗುವ ಯೂರಿಕ್ ಆಸಿಡ್ ಪಾರಂಪರಿಕ ಕಟ್ಟಡಕ್ಕೆ ಧಕ್ಕೆಯನ್ನುಂಟು ಮಾಡುತ್ತಿದೆ ಎಂದರು.
ತಾಯಿ ಪ್ರಮೋದಾದೇವಿ ಒಡೆಯರ್ ಅವರಿಂದ ಸಂಸದ ಯದುವೀರ್ ಪಾರಿವಾಳಗಳ ಬಗ್ಗೆ ಮೊದಲು ದೂರು ಬಂದಿದ್ದು, ಅವರಿಗೆ ಸಾಕಷ್ಟು ದೂರುಗಳು ಪಾರಿವಾಳಗಳ ಬಗ್ಗೆ ಬಂದಿತ್ತು. ಇದು ವನ್ಯಜೀವಿ ಸಂತತಿಗೆ ಸೇರಿದ ಪಕ್ಷಿಯಾಗಿದೆ. ಇವುಗಳಿಗೆ ಅಹಾರ ಕೊಡುವ ಅವಶ್ಯಕತೆ ಇಲ್ಲ. ಪಾರಿವಾಳಗಳ ಯೂರಿಕ್ ಆಸಿಡ್ ನಿಂದ ಪಾರಂಪರಿಕ ಕಟ್ಟಡಗಳಿಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

