ಧಾರವಾಡ: ಪೌರಕಾರ್ಮಿಕರ ದಿನಾಚರಣೆ ಹಿನ್ನೆಲೆಯಲ್ಲಿ ಧಾರವಾಡದ ಮಹಾತ್ಮ ಬಸವೇಶ್ವರ ನಗರದಲ್ಲಿ ಸೋಮವಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸ್ವಚ್ಛತಾ ಸೇವೆಗೈಯುವ ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಮಾತನಾಡಿ, ಪ್ರತಿನಿತ್ಯ ಪೌರಕಾರ್ಮಿಕರು ಮಾಡುವ ಸೇವೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಡಾ. ಎಸ್. ಆರ್ ರಾಮನಗೌಡರ, ಬಸವರಾಜ ಕೆಂಚನಳ್ಳಿ, ಶೇಕರ ಕವಳಿ, ಶ್ರೀಕಾಂತ ಕ್ಯಾತಪ್ಪನವರ, ಅಶೋಕ ಶೆಟ್ಟರ ಸೇರಿದಂತೆ ಹಲವರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

