ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ಮುಖಂಡರೊಂದಿಗೆ ಅಕ್ಟೋಬರ್ 15ರಂದು ಸಭೆ ನಡೆಸಿ, ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಳಂಬವಾಗುತ್ತಿರುವ ಕುರಿತು ಚರ್ಚಿಸಲು ಬೆಳಗಾವಿಯಲ್ಲಿ ಲಿಂಗಾಯತ ವಕೀಲರ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಈ ಸಮಾವೇಶದಲ್ಲಿ ಮಾತನಾಡಿದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, , ಸರ್ಕಾರದಲ್ಲಿ ಯಾರಿದ್ದಾರೆಂದು ನೋಡಿಕೊಂಡು ನಾವು ಪ್ರತಿಭಟನೆ ಮಾಡುವುದಿಲ್ಲ. ರಾಜಕೀಯ ಹೋರಾಟವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ. ಮೀಸಲಾತಿಗಾಗಿ ಹೋರಾಟ ಮಾಡುವಾಗ ರಾಜಕೀಯವನ್ನು ತರಬೇಡಿ. ನಾವು ಸಾಮಾನ್ಯವಾಗಿ ಕೋರ್ಟ್ ಕಟ್ಟೆ ಹತ್ತುವುದಿಲ್ಲ. ಒಮ್ಮೆ ಹತ್ತಿದರೆ ಸರಕಾರವನ್ನು ಸೋಲಿಸುವವರೆಗೆ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

