Breaking News

ಪ್ಯಾಲೆಸ್ತೀನ್ ಗೆ ಭಾರತದ ಬೆಂಬಲ ನಿರಂತರ ಎಂದ ಪ್ರಧಾನಿ ಮೋದಿ

ನ್ಯೂಯಾರ್ಕ್​​​​: ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್ ನ ಲೊಟ್ಟೆ ನ್ಯೂಯಾರ್ಕ್ ಪ್ಯಾಲೇಸ್ ಹೋಟೆಲ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
ಅಮೆರಿಕದ ವಲಸಿಗರಿಗೆ ಗಾಜಾದಲ್ಲಾದ ಪರಿಸ್ಥಿತಿಯ ಬಗ್ಗೆ ಮೋದಿ ಅವರು ಕಳವಳ ವ್ಯಕ್ತಪಡಿಸಿದರು. ಹಾಗೆಯೇ ಪ್ಯಾಲೇಸ್ಟಿನಿಯನ್ ಜನರಿಗೆ ಭಾರತದ ಬೆಂಬಲ ಯಾವಾಗಲೂ ಇರುತ್ತದೆ ಎಂದು ಹೇಳಿದರು.
ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ಪ್ರಧಾನಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಪ್ಯಾಲೆಸ್ತೀನ್ ಜನರಿಗೆ ಭಾರತದ ನಿರಂತರ ಬೆಂಬಲವನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮೊದಲ ಜಾಗತಿಕ ನಾಯಕರಲ್ಲಿ ಮೋದಿ ಒಬ್ಬರು. ಗಾಜಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಭಾರತ ಪದೇ ಪದೇ ಕಳವಳ ವ್ಯಕ್ತಪಡಿಸಿದೆ.
ಭಾರತವು ತನ್ನ ಬದ್ಧತೆಯ ಭಾಗವಾಗಿ ಗಾಜಾದ ಜನರಿಗೆ ಮಾನವೀಯ ನೆರವನ್ನು ಕಳುಹಿಸಿದೆ. ಜುಲೈನಲ್ಲಿ, ಭಾರತವು ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿಗೆ 2.5 ಮಿಲಿಯನ್ ಡಾಲರ್‌ಗಳ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದೆ ಎಂದರು.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *