Breaking News

ಕೃಷಿ ಮೇಳಕ್ಕೆ ಅಂದಾಜು ಏಳೂವರೆ ಲಕ್ಷ ಜನ ಭೇಟಿ

ಧಾರವಾಡ: ನಿನ್ನೆ ಭಾನುವಾರ ರಜಾ ದಿನವಾಗಿದ್ದರಿಂದ ಧಾರವಾಡದ ಕೃಷಿ ಮೇಳಕ್ಕೆ ಅಂದಾಜು ಏಳೂವರೆ ಲಕ್ಷ ಜನ ಭೇಟಿ ಕೊಟ್ಟಿದ್ದರು.

ಇಂದು ಸೋಮವಾರವಾದರೂ ಮಧ್ಯಾಹ್ನದವರೆಗೂ ಸುಮಾರು ನಾಲ್ಕೂವರೆ ಲಕ್ಷ ಜನ ಕೃಷಿ ಮೇಳಕ್ಕೆ ಬಂದು ಕೃಷಿ ಮೇಳದ ಮೆರಗು ಮತ್ತಷ್ಟು ಹೆಚ್ಚಾಗುವಂತೆ ಮಾಡಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದಲೂ ಜನ ಕೃಷಿ ಮೇಳಕ್ಕೆ ಆಗಮಿಸಿದ್ದು, ಕೃಷಿಗೆ ಬೇಕಾದ ಸಲಕರಣೆಗಳನ್ನು ಖರೀದಿ ಮಾಡಿಕೊಂಡು ಹೋಗುತ್ತಿದ್ದಾರೆ. ಇದರ ಜೊತೆಗೆ ಕೃಷಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಪೂರಕ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ನಾಳೆಯೂ ಒಂದು ದಿನ ಕೃಷಿ ಮೇಳ ಜರುಗಲಿದ್ದು, ಕೊನೆಯ ದಿನವಾದ ನಾಳೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ನಿರೀಕ್ಷೆ ಇದೆ.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *