Breaking News

ನಟೋರಿಯಸ್ ರೌಡಿ ಶೀಟರ್ ಅರೆಸ್ಟ್ ಮಾಡಿದ ಹುಬ್ಬಳ್ಳಿ ಪೋಲಿಸರು

ಹುಬ್ಬಳ್ಳಿಯಲ್ಲಿ ಮತ್ತೊಂದು ಫೈರಿಂಗ್…

ಖಾಕಿಪಡೆಗೆ ಚಳ್ಳೆಹಣ್ಣು ತಿನಿಸಿಲು ಹೋಗಿ ಕಿಮ್ಸ್ ಪಾಲಾದ ಭೂಪ!!!!

ರೋಡಲ್ಲಿ ನಿಂತು ವಸೂಲಿ ಮಾಡಿದ್ರೆ ಕಾಲು ಕಳೆದುಕೊಳ್ಳುವ ಗ್ಯಾರಂಟಿ ಸಂದೇಶ ಕೊಟ್ಟ ಪೊಲೀಸರು!

ಹುಬ್ಬಳ್ಳಿ:ತಲ್ವಾರ್ ತೋರಿಸಿ ಚಿನ್ನಾಭರಣ, ಹಣ ಸೇರಿದಂತೆ ಮೊಬೈಲ್ ಫೋನ್‌ಗಳನ್ನು ದೋಚುತ್ತಿದ್ದ ನಟೋರಿಯಸ್ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಅರೆಸ್ಟ್ ಮಾಡಿದ್ದಾರೆ.

ವಿನೋದ್ ಗುಡಿಹಾಳ ಎಂಬಾತನ ಮೇಲೆಯೇ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈತ ಬಳ್ಳಾರಿ, ಧಾರವಾಡ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳ ಹೆದ್ದಾರಿಗಳಲ್ಲಿ ಮಾರಕಾಸ್ತ್ರ ತೋರಿಸಿ ವಾಹನ ಸವಾರರಿಂದ ಹಣ, ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗುತ್ತಿದ್ದ.

ನಿನ್ನೆ ಕೂಡಾ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿ ಚಾಲಕನನ್ನು ಅಡ್ಡಗಟ್ಟಿದ ಮೂವರು ತಲ್ವಾರ್‌ನಿಂದ ಹಲ್ಲೆ ನಡೆಸಿ ಆತನ ಬಳಿಯಿದ್ದ 10 ಸಾವಿರ ಹಣ ಹಾಗೂ ಮೊಬೈಲ್ ದೋಚಿಕೊಂಡು ಪರಾರಿಯಾಗಿದ್ದರು. ಲಾರಿ ಚಾಲಕ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗುತ್ತಿದ್ದ ಹಾಗೆ ಕಮಿಷನರ್ ಎನ್ ಶಶಿಕುಮಾರ್ ಆರೋಪಿಗಳನ್ನು ಬಂಧಿಸಲು ಒಂದು ತಂಡವನ್ನು ರಚನೆ ಮಾಡಿದ್ದರು.

ಈ ವೇಳೆ ಆರೋಪಿಗಳು ರಿಂಗ್ ರೋಡ್ ಬಳಿ ಇರುವ ಮಾಹಿತಿ ಮಾಹಿತಿ ಆಧರಿಸಿ ಬೆಂಡಿಗೇರಿ ಠಾಣೆಯ ಪೊಲೀಸರು ಬಂಧಿಸಲು ಹೋದಾಗ, ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾದಾಗ ಆರೋಪಿ ವಿನೋದ್ ಗುಡಿಹಾಳ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ಘಟನೆಯಲ್ಲಿ ಮೂವರು ಪೊಲೀಸರಿಗೂ ಕೂಡಾ ಗಾಯವಾಗಿದೆ.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *