Breaking News

ಸಿಎಂ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಸಭೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ನಾಲ್ಕನೇ ಸಭೆ ನಡೆಸಲಾಯಿತು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ.179.30 ಕೋಟಿ ಟೆಂಡರ್‌ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತ್ತು, ಈಗ ಕಾಮಗಾರಿ ಮುಗಿಸಲು 3 ತಿಂಗಳ ಡೆಡ್ ಲೈನ್ ನೀಡಲಾಗಿದೆ.
ಈ ಜೊತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲು ಈ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ವರ್ಟಿಕಲ್‌ ಶಾಲೆ ಪ್ರಾರಂಭಿಸುವ ಕುರಿತು ಪರಿಶೀಲನೆ ಮಾಡುವಂತೆ ಸಿಎಂ ಈ ಸಭೆಯಲ್ಲಿ ಸೂಚಿಸಿದರು. ಜೊತೆಗೆ ಸೈನಿಕ ಶಾಲೆಯಲ್ಲಿ ಖಾಯಂ ಶಿಕ್ಷಕರ ನೇಮಕಾತಿಗೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಕೂಡ ಇದೇ ವೇಳೆ ಸಿಎಂ ಸೂಚಿಸಿದರು.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ರೂ.75.29 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು, ನವೆಂಬರ್‌ ಎರಡನೇ ವಾರದ ಒಳಗಾಗಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು. ನಂದಗಢದಲ್ಲಿ ಕೆರೆ ಅಭಿವೃದ್ಧಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಾಪನೆಯ ಕಾಮಗಾರಿಗಳನ್ನೂ ಇದೇ ಗಡುವಿನೊಳಗೆ ಪೂರ್ಣಗೊಳಿಸಲು ಸೂಚಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ 2024-25 ನೇ ಸಾಲಿನ ಕ್ರಿಯಾ ಯೋಜನೆ ರೂ. 15.48 ಕೋಟಿಗೆ ಅನುಮೋದನೆ ನೀಡಲಾಯಿತು. ಜೊತೆಗೆ ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಸಲಹಾ ಸಮಿತಿ ರಚನೆ ಮಾಡಲು ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಯಿತು.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *