Breaking News

ಸಿಡಿಲು ಬಡಿದು ನಾಲ್ವರು ಸಾವು

ಯಾದಗಿರಿ: ತಾಲ್ಲೂಕಿನ ಜಿನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ.
ಕಿಶನ್‌ ನಾಮಣ್ಣ ಜಾಧವ (33), ಚನ್ನಪ್ಪ ನಾಮಣ್ಣ ಜಾಧವ (24), ಸುನಿಬಾಯಿ ರಾಠೋಡ (30), ನೇನು ನಿಂಗಪ‍್ಪ ಜಾಧವ (18) ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ತಾಂಡಾದ ಜಮೀನಿನಲ್ಲಿ ಈರುಳ್ಳಿ ಸಸಿ ನಾಟಿ ಮಾಡುತ್ತಿರುವ ವೇಳೆ ಮಳೆ ಬಂದಿದ್ದರಿಂದ ಇದರಿಂದ ತಪ್ಪಿಸಿಕೊಳ್ಳಲು ಜಮೀನಿನಲ್ಲಿರುವ ದುರುಗಮ್ಮ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ.
ಮೌನೇಶ ಉನ್ನಪ್ಪ, ಗಣೇಶ ಮೌನೇಶ, ದರ್ಶನ ಕಿಶನ್‌ ಸಿಡಿಲಿನಿಂದ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಯಾದಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *