ಮೈಸೂರು: ಭಾರತದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಇಂದು ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸರ್ಕಾರದ ಮಾನ್ಯ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು.
ಮೈಸೂರಿನಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿಯೂ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಈ ಭಾಗದಲ್ಲಿ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚು ಎಂದರು. ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ರೇಷ್ಮೆ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರೇಷ್ಮೆ ಗೂಡಿಗೆ ಕಳೆದ ಎರಡು ಮೂರು ವರ್ಷಗಳಿಂದ ಉತ್ತಮವಾದ ಬೆಲೆ ಸಿಗುತ್ತಿದ್ದು, ಬೆಳೆಗಾರರು ಲಾಭ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ 1.52 ಲಕ್ಷ ಕೋಟಿ ರೂಪಾಯಿ ಹಣವನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿಟ್ಟಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತವೆ ಎಂದರು.
ಇದೇ ವೇಳೆ ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ 75 ರೂಪಾಯಿಯ ನಾಣ್ಯವನ್ನು ಬಿಡುಗಡೆಗೊಳಿಸಲಾಯಿತು. ಕೇಂದ್ರ ರೇಷ್ಮೆ ಮಂಡಳಿಯ ಕಾಫಿ ಟೇಬಲ್ ಬುಕ್ ಅನ್ನು ಬಿಡುಗಡೆ ಮಾಡಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

