Breaking News

ಛಾಯಾಗ್ರಾಹಕರ ಕುಟುಂಬಕ್ಕೆ ಸಹಾಯ, ಸಹಕಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಕೋನರಡ್ಡಿ

ಅಣ್ಣಿಗೇರಿ: ಛಾಯಾಗ್ರಾಹಕರ ಉದ್ಯೋಗ ಬಹಳ ಕಷ್ಟಕರವಾಗಿ ಸಾಗುತ್ತಿದೆ. ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಛಾಯಾಗ್ರಾಹಕರ ಕುಟುಂಬಕ್ಕೆ ಸಹಾಯ, ಸಹಕಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಕೋನರಡ್ಡಿ ಭರವಸೆ ನೀಡಿದರು.

ಅವರು ಸ್ಥಳೀಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಹಮ್ಮಿಕೊಂಡಿದ್ದ ನೂತನ ಅಣ್ಣಿಗೇರಿ ತಾಲ್ಲೂಕು ಛಾಯಾ ಗ್ರಾಹಕರ ಕ್ಷೇಮಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಪಟ್ಟಣದಲ್ಲಿ ನೂತನವಾಗಿ ಛಾಯಾಗ್ರಾಹಕರ ಸಮುದಾಯ ಭವನ ನಿರ್ಮಾಣಕ್ಕಾಗಿ ಶಾಸಕರ ಅನುದಾನದಲ್ಲಿ 5 ಲಕ್ಷ ಅನುದಾನ ನೀಡುತ್ತೇನೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಛಾಯಗ್ರಾಹಕರು ಕರ್ತವ್ಯ ನಿರ್ವಹಿಸುತ್ತಿರುವ ವಾಸಸ್ಥಳದಲ್ಲಿ ಮನೆ ಇಲ್ಲದವರಿಗೆ ಆಶ್ರಯ ಮನೆ ಕೂಡಾ ಮುಂಬರುವ ದಿನಗಳಲ್ಲಿ ವಿತರಣೆ ಮಾಡಲಾಗುವುದು ಎಂದರು.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *