Breaking News

ತಮಿಳುನಾಡಿನಲ್ಲಿ ಯುವಕನ ಜನಿವಾರ ಕತ್ತರಿಸಿದ ಪ್ರಕರಣಕ್ಕೆ ಕಿಡಿಕಾರಿದ ವಕೀಲ ಲಕ್ಷ್ಮಣ ಚಿದಂಬರ್ ಕುಲಕರ್ಣಿ

ಹುಬ್ಬಳ್ಳಿ: ತಮಿಳುನಾಡಿನಲ್ಲಿ 12 ವರ್ಷದ ಅಖಿಲೇಶ ಎಂಬ ಬಾಲಕ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ 6-7 ಜನರ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ಮಾಡಿ, ಪವಿತ್ರ ಜನಿವಾರವನ್ನು ಕತ್ತರಿಸಿ, ಮತ್ತೊಮ್ಮೆ ಜನಿವಾರವನ್ನು ಹಾಕಿಕೊಳ್ಳಬಾರದೆಂದು ಬೆದರಿಕೆ ಹಾಕಿದ್ದಾರೆ. ಇದು ಸನಾತನ ಹಿಂದೂ ಧರ್ಮಕ್ಕೆ ಮತ್ತು ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಈ ಘಟನೆ ಅತ್ಯಂತ ಖಂಡನೀಯ ಎಂದು ವಿಶ್ವ ವಿಪ್ರ ಸೇವಾ ಟ್ರಸ್ಟ್ ಅಧ್ಯಕ್ಷ ಹಾಗೂ ವಕೀಲರಾದ ಲಕ್ಷ್ಮಣ ಚಿದಂಬರ್ ಕುಲಕರ್ಣಿ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಿರುಪತಿಯಲ್ಲಿ ಲಡ್ಡುವಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗಿದೆ. ಅದೇ ರೀತಿಯಲ್ಲಿ ಇದೀಗ ಜನಿವಾರ ಧರಿಸಿದ ಬ್ರಾಹ್ಮಣ ಸಮುದಾಯದ ಜನರ ಮೇಲೆ ಹಲ್ಲೆ ಮಾಡಿ ಸನಾತನ ಧರ್ಮವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *