ಹುಬ್ಬಳ್ಳಿ : ಗುರುವರ್ಯ ಪಂಡಿತ ಶ್ರೀ ಸವಾಯಿ ಗಂಧರ್ವರ 72 ನೇ ಪುಣ್ಯತಿಥಿಯ ಅಂಗವಾಗಿ ಕುಂದಗೋಳದ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಸಂಗೀತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಪ್ರಸಿದ್ದ 46 ಸಂಗೀತಗಾರರಿಂದ ಸಂಗೀತ ಕಾರ್ಯಕ್ರಮ ನೆರವೇರಲಿದೆ ಎಂದು ಅರವಿಂದ ಕಟಗಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು,ಇದೇ ಸಪ್ಟೆಂಬರ್ 26 ಹಾಗೂ 27 ರಂದು ಎರಡು ದಿನಗಳ ಕಾಲ ಅಹೋರಾತ್ರಿ ಈ ಸಂಗೀತೋತ್ಸವ ನೆರವೇರಲಿದ್ದು, ಕಾರ್ಯಕ್ರಮವನ್ನು ಸಚಿವ ಸಂತೋಷ ಲಾಡ್ ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಭಾರತರತ್ನ ಪಂ. ಭೀಮಸೇನ ಜೋಶಿಯವರ ಪುತ್ರ ಶ್ರೀನಿವಾಸ ಜೋಶಿಯವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸವಾಯಿ ಗಂಧರ್ವ ರಾಷ್ಟ್ರೀಯ ಪುರಸ್ಕಾರವನ್ನು ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕುಂದಗೋಳ ಶಾಸಕ ಎಂ.ಆರ್ ಪಾಟೀಲ್, ಮಾಜಿ ಸಂಸದ ಪ್ರೋ, ಐ.ಜಿ ಸನದಿ ಸೇರಿದಂತೆ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

