Breaking News

ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ: ತಾಂಡಾಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಭೇಟಿ

ಯಾದಗಿರಿ: ಸೋಮವಾರ ಸಿಡಿಲು ಬಡಿದು ನಾಲ್ವರು ಮೃತಪಟ್ಟದ್ದರು ಇಂದು ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ತಾಂಡಾಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.
ಸಿಡಿಲು ಬಡಿದು ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ಹೇಳಿದರು. ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ ಸುರೇಶ ಅಂಕಲಗಿ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *