Breaking News

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ತುರ್ತು ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು : ಮುಡಾ ಹಗರಣದ ಬಗ್ಗೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಳೆ ಬೆಳಗ್ಗೆ 10 ಗಂಟೆ ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್ ಪಿ ಸಭೆ ನಡೆಯಲಿದ್ದು, ಮುಂದಿನ ಸಿಎಂ ನಡೆ ಬಹಳ ಕುತೂಹಲ ಮೂಡಿಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಸಂಕಷ್ಟ ಎದುರಾಗಿದೆ. ಹೈಕೋರ್ಟ್ ತಿರ್ಪು ಪ್ರಕಟವಾಗುತ್ತಿದ್ದಂತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳು ಸಿಎಂ ಕಾವೇರಿ ನಿವಾಸಕ್ಕೆ ದೌಡಾಯಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *