ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲದ ನಿರ್ಧಾರವನ್ನು ಹೈಕೋರ್ಟ್ ಎತ್ತಿಹಿಡಿದೆ. ಸಿದ್ದರಾಮಯ್ಯ ಅರ್ಜಿ ವಜಾಗೊಂಡಿದ್ದು, ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿಯಲ್ಲಿ ಸಂತಸ ಮನೆ ಮಾಡಿದೆ.
ಮುಂದಿನ ಹೋರಾಟ ಪ್ರಕಟಕ್ಕೆ ಬಿಜೆಪಿ ಮುಂದಾಗಿದ್ದು, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನವರೆಗೂ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿತ್ತು.
ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದರು. ಕಳೆದ ಹಲವು ದಿನಗಳಿಂದ ಭ್ರಷ್ಟ ಕಾಂಗ್ರೆಸ್ ವಿರುದ್ಧ ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದೀವಿ, ವಾಲ್ಮೀಕಿ ಹಗರಣದಂತೆ ಮುಡಾ ಹಗರಣದಲ್ಲಿ ಹೋರಾಟ ಮಾಡಿದ್ವಿ. ಸ್ವತಃ ಸಿಎಂ ಕುಟುಂಬವೇ ಭಾಗಿಯಾಗಿರುವಂತ, ಅವರೇ ಫಲಾನುಭವಿಗಳು ಇದರ ವಿರುದ್ಧ ನಾವು ಬೆಂಗಳೂರಿಂದ ಮೈಸೂರಿನ ವರೆಗೆ ಪಾದಯಾತ್ರೆ ನಡೆಸಿದ್ವಿ. ಮೈಸೂರು ಚಲೋ ವನ್ನು ಜೆಡಿಎಸ್ ಜೊತೆ ಒಟ್ಟಾಗಿ ಪಾದಯಾತ್ರೆ ಯಶಸ್ವಿಯಾಗಿ ಮಾಡಿದ್ವಿ ಎಂದರು.
ಸಿಎಂ ವಿರುದ್ಧ ಹೋರಾಟಕ್ಕೆ ಕರೆ ಕೊಟ್ಟ ಬಿ ವೈ ವಿಜಯೇಂದ್ರ, ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸುವ ಮೂಲಕ ಹೈಕೋರ್ಟ್ ತೀರ್ಪು ಜನರಿಗೆ ತಿಳಿಸಿ, ಸಿಎಂ ರಾಜೀನಾಮೆಗೆ ಒತ್ತಾಯಿಸುವಂತೆ ಸೂಚನೆ ನೀಡಿದ್ದಾರೆ.
ಕಾನೂನು ಎದುರು ಎಲ್ಲರು ಕೂಡ ಒಂದೇ ಹೈಕೋರ್ಟ್ ಹೇಳಿದೆ. ಸಿಎಂ ಸಿದ್ದರಾಮಯ್ಯಗೆ ನಾನು ಆಗ್ರಹ ಮಾಡ್ತೀನಿ ಗವರ್ನರ್ ಮೇಲೆ ಆಪಾದನೆ ಮಾಡೋದನ್ನು ಬದಿಗೊತ್ತಿ, ಗವರ್ನರ್ ಆದೇಶವನ್ನು ಗೌರವಸಿಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

