Breaking News

ಯಾವ ತನಿಖೆಗೂ ಹಿಂಜರಿಯುವುದಿಲ್ಲ, ಸತ್ಯಕ್ಕೆ ಜಯ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ, ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ, ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಪಾಲರ ಪ್ರಾಸಿಕ್ಯೂಷನ್ ಹೈಕೋರ್ಟ್ ಎತ್ತಿ ಹಿಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಅವರು ಜನರ ಬೆಂಬಲ‌ ಇರೋವರೆಗೆ ಷಡ್ಯಂತ್ರ ಫಲಿಸದು ಎಂದಿದ್ದಾರೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ ಎಂದು ತಿಳಿಸಿದ್ದಾರೆ.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದಿದ್ದಾರೆ.
ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಸವಾಲು ಹಾಕಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *