Breaking News

ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು: ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ನಡೆದಿದೆ.
ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇಂದು ಬೆಳಗ್ಗೆ ನೀಡಿದ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಗಳ ಹಿಂದೆಯಷ್ಟೆ ಆಹಾರದಲ್ಲಿ ವಿಷ ಬೇರೆಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ, ವಿದ್ಯಾರ್ಥಿಗಳ ಜೀವಕ್ಕೆ ಬೆಲೆಯೇ ಇಲ್ಲವೇ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *