ಮುಂಬೈ: ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಂ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅನುಮೋದಿಸಿದೆ.
ಇದಕ್ಕೂ ಮೊದಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಶಿಫಾರಸು ಮಾಡಿದ್ದರು. ವಿಮಾನಯಾನ ಸಚಿವ ಮುರುಳೀಧರ್ ಮೊಹೇಲ್ ಮಾತನಾಡಿ, ಇದೀಗ ಏಕ್‌ನಾಥ್ ಶಿಂಧೆ ನೇತೃತ್ವದ ಸರ್ಕಾರವು ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಇಂದು ಸಲ್ಲಿಸಿದೆ. ಮರುನಾಮಕರಣ ನಿಟ್ಟಿನಲ್ಲಿ ಇದು ನಮ್ಮ ಮೊದಲ ಹೆಜ್ಜೆಯಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

