ಧಾರವಾಡ : ಬಾಲನ್ಯಾಯ ಕಾಯ್ದೆ 2015 ರ ಪ್ರಕಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಧಾರವಾಡದಡಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪಾಲನೆ, ಪೋಷಣೆಗೆಂದು ದಾಖಲಾಗಿರುವ ಮಕ್ಕಳ ಪಾಲಕರು ಅಥವಾ ಪೋಷಕರ ಪತ್ತೆಯಾಗಿರುವುದಿಲ್ಲ.
ಆದ್ದರಿಂದ ಹುಬ್ಬಳ್ಳಿಯ ಮನೋವಿಕಲ ಬಾಲಕಿಯರ ಸರ್ಕಾರಿ ಬಾಲಮಂದಿರದ ಯಲ್ಲಮ್ಮ, ಮೌನಾ, ಶೃತಿ, ಪ್ರಿಯಾ, ಹಾಗೂ ರೂಪಾ ಎಂಬ ಮಕ್ಕಳ ಪಾಲಕರು ಅಥವಾ ಪೋಷಕರ ಕಾನೂನು ರೀತಿ ಹಕ್ಕುಳ್ಳವರು ಎಲ್ಲಿದ್ದರೂ 4 ತಿಂಗಳ ಅವಧಿ ಮುಗಿಯುವದರ ಒಳಗಾಗಿ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸಂಪರ್ಕಿಸಬೇಕು. ಒಂದು ವೇಳೆ ಯಾರೂ ವಾರಸದಾರರು ಬಾರದ ಪಕ್ಷದಲ್ಲಿ ಕಾನೂನು ರೀತ್ಯ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

