Breaking News

ಹುಬ್ಬಳ್ಳಿಯಲ್ಲಿಯೂ ಸಿಎಂ ರಾಜಿನಾಮೆ ಕೊಡುವಂತೆ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿರುವ ಮುಡಾ ಹಗರಣದಲ್ಲಿ ಹೈಕೋರ್ಟ್ ಸಿಎಂ ಅರ್ಜಿ ವಜಾ ಮಾಡಿದ್ದು, ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಸಿಎಂ ರಾಜಿನಾಮೆ ಕೂಗು ದಟ್ಟವಾಗಿ ಕೇಳಿ ಬರುತ್ತಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಅರ್ಜಿ ವಜಾ ಆಗಿದೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬಡವರ ಸೈಟ್ ನುಂಗಿದ ಸಿದ್ದರಾಮಯ್ಯ ರಾಜಿನಾಮೇ ಕೊಡಬೇಕೆಂದು ಘೋಷಣೆ ಕೂಗಿದರು. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ವಿಧಾನ ಸಭಾ ವಿರೋಧ ಪಕ್ಷದ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಆಗ್ರಹಿಸಿದರು.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *