Breaking News

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣ ವಚನ ಸ್ವೀಕಾರ

ಶ್ರೀಲಂಕಾ: ಶ್ರೀಲಂಕಾದ ನೂತನ ಪ್ರಧಾನಿಯಾಗಿ 54 ವರ್ಷದ ನ್ಯಾಷನಲ್ ಪೀಪಲ್ಸ್ ಪವರ್(ಎನ್‌ಪಿಪಿ) ಪಕ್ಷದ ನಾಯಕಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹರಿಣಿ ಅಮರಸೂರ್ಯ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದು, ಪ್ರಮಾಣ ವಚನ ಬೋಧಿಸಿದ್ದಾರೆ.
ಮಾನವ ಹಕ್ಕುಗಳ ಕಾರ್ಯಕರ್ತೆ ಮತ್ತು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ಹರಿಣಿ ಅಮರಸೂರ್ಯ ಅವರು 2000ನೇ ವರ್ಷದಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ ಎಂಬ ಗೌರವಕ್ಕೆ ಇವರು ಪಾತ್ರರಾಗಿದ್ದು, ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಹಾಗೂ ಹೂಡಿಕೆ ಖಾತೆಗಳನ್ನು ಪಡೆದುಕೊಂಡಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *