ಧಾರವಾಡ: ಸರ್ಕಾರಿ ಶಾಲಾ ಮಕ್ಕಳಿಗೆ ವಾರದ ಆರೂ ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ಕೆ ಇಂದು ರಾಜ್ಯದಾದ್ಯಂತ ಚಾಲನೆ ನೀಡಲಾಗಿದೆ.
ವಾರದ ಎರಡು ದಿನ ಮಾತ್ರ ರಾಜ್ಯ ಸರ್ಕಾರ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುತ್ತದೆ. ಆದರೆ, ಶಾಲಾ ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಬಾಕಿ ನಾಲ್ಕೂ ದಿನ ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂದು ಅಜೀಂ ಪ್ರೇಮ್ ಜೀ ಫೌಂಡೇಶನ್ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ವಾರದ ಆರೂ ದಿನ ಇಂದಿನಿಂದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಎಸ್‌ಡಿಎಂಸಿ ಸರ್ವ ಸದಸ್ಯರು ಮೊಟ್ಟೆ ತಿನ್ನುವ ಮಕ್ಕಳಿಗೆ ಮೊಟ್ಟೆ, ಶೇಂಗಾ ಚಿಕ್ಕಿ ತಿನ್ನಬಯಸುವ ಮಕ್ಕಳಿಗೆ ಶೇಂಗಾ ಚಿಕ್ಕಿ ವಿತರಣೆ ಮಾಡಿದರು. ವಾರದ ಆರೂ ದಿನ ಇನ್ನುಮುಂದೆ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

